ಸಂವಿಧಾನ ದಿನಾಚರಣೆಯ ಪೂರ್ವಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ನಡೆಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮಂಡ್ಯದ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಗೆ ಪ್ರತಿಷ್ಠಿತ ‘ಕೌಶಲ್ಯ ಕರ್ನಾಟಕ ಪ್ರಶಸ್ತಿ’ ಗರಿ ಲಭಿಸಿದ್ದು, ರಾಜ್ಯದ ‘ಅತ್ಯುತ್ತಮ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಗ್ರಾಮೀಣ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಹಿಳೆಯರು, ವಿಧವೆಯರು, ಕಾರಾಗೃಹ ನಿವಾಸಿಗಳು ಸೇರದಂತೆ ಅರ್ಹ ಹಾಗೂ ಸಂಕಷ್ಟದಲ್ಲಿರುವ ಮಹಿಳೆಯರಿಗೆ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಸಂಸ್ಥೆಯದ್ದಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸಿಗುವ ಬಾಳೆ ನಾರು, ತೆಂಗಿನ ನಾರು, ಸೆಣಬಿನ ಉತ್ಪನ್ನಗಳಿಂದ ಆಕರ್ಷಕ ಕರಕುಶಲ ವಸ್ತುಗಳ ತಯಾರಿಕೆ, ಬ್ಯೂಟಿ ಪಾರ್ಲರ್, ಟೈಲರಿಂಗ್, ಕಂಪ್ಯೂಟರ್ ಟ್ಯಾಲಿ, ಸಿಸಿಟಿವಿ ಅಳವಡಿಕೆ, ಕುರಿ-ಮೇಕೆ ಸಾಕಣೆ, ಅಣಬೆ ಕೃಷಿ ಹಾಗೂ ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಸಿರಿಧಾನ್ಯ ಆಧಾರಿತ ಪೌಷ್ಟಿಕ ಬೇಕರಿ ಉತ್ಪನ್ನಗಳ ತಯಾರಿಕೆಗೆ ವಿಶೇಷ ಒತ್ತು ನೀಡಲಾಗಿದೆ.
ದೂರದರ್ಶದೊಂದಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಪ್ರಸಕ್ತ ಸಾಲಿನಲ್ಲಿ ಸಂಸ್ಥೆಯು 1037 ಅಭ್ಯರ್ಥಿಗಳಿಗೆ ಯಶಸ್ವಿಯಾಗಿ ಕೌಶಲ್ಯ ತರಬೇತಿ ನೀಡಿದ್ದು, ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಲಾಗುತ್ತಿದೆ ಎಂದರು.
ಬ್ಯಾಂಕ್ ಆಫ್ ಬರೋಡದ ಪ್ರಾದೇಶಿಕ ವ್ಯವಸ್ಥಾಪಕ ಸತೀಶ್, ಸಂಸ್ಥೆಯು ಅರ್ಹರಿಗೆ ಯಶಸ್ವಿಯಾಗಿ ಕೌಶಲ್ಯ ತರಬೇತಿ ನೀಡಿದ್ದು, ಶೇ.85ರಷ್ಟು ತರಬೇತಿದಾರರು ಸ್ವ-ಉದ್ಯೋಗ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಸಂಸ್ಥೆಯ ನಿರ್ದೇಶಕ ಪ್ರಸನ್ನ ಕುಮಾರ್, ಗ್ರಾಮೀಣ ಮಹಿಳೆಯರು ಮಾತ್ರವಲ್ಲದೆ ಪದವಿ, ಇಂಜಿನಿಯರಿಂಗ್ ಮುಗಿಸಿ ಉದ್ಯೋಗ ಹುಡುಕುತ್ತಿರುವ ಯುವಜನತೆ ವೃತ್ತಿ ಕೌಶಲ್ಯಗಳನ್ನು ಕಲಿಸಿ ಸ್ವ-ಉದ್ಯೋಗಿಗಳನ್ನಾಗಿ ಮಾಡುವುದು ಮತ್ತೊಂದು ಗುರಿ ಎಂದರು.
ತರಬೇತುದಾರ ರವಿ ಡಿ.ಎಸ್, ಈ ಸಂಸ್ಥೆಯು ಎರಡೂವರೆ ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದು, ನಿರುದ್ಯೋಗಿಗಳಿಗೆ ಆಶಾಕಿರಣವಾಗಿದೆ ಎಂದು ಹೇಳಿದರು.

