ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ಉಜ್ಜಿನಿ ಬಳಿ ಅಣೆಕಟ್ಟು ನಿರ್ಮಾಣಕ್ಕೆ ಮಹಾರಾಷ್ಟ್ರ ಯತ್ನ: ಕೃಷ್ಣಾ ನದಿ ನೀರು ಹಂಚಿಕೆ ಅನ್ಯಾಯ ಖಂಡಿಸಿ ಸಚಿವ ಎಂ. ಬಿ. ಪಾಟೀಲ್ ಆಕ್ಷೇಪ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಬೆಂಗಳೂರು: ಮಹಾರಾಷ್ಟ್ರ ಸರಕಾರ ಉಜ್ಜಿನಿ ಬಳಿ 40 ಟಿಎಂಸಿ ಸಾಮರ್ಥ್ಯದ ಅಣೆಕಟ್ಟು ಕಟ್ಟಲು ಮುಂದಾಗುತ್ತಿದೆ. ಇದು ಕೃಷ್ಣಾ ನದಿ ನೀರಿನ ವಿಚಾರದಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಇದರ ವಿರುದ್ಧ ಕೇಂದ್ರ ಜಲ ಸಂಪನ್ಮೂಲ ಸಚಿವರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ತೀರ್ಮಾನವು ಕೃಷ್ಣಾ ನ್ಯಾಯಾಧೀಕರಣದ ತೀರ್ಪಿಗೆ ವಿರುದ್ಧವಾಗಿದೆ. ಇಂತಹ ಯೋಜನೆಗೆ ವಿಶ್ವಬ್ಯಾಂಕ್ ಹೇಗೆ ಹಣ ಕೊಡುತ್ತದೆ ಎನ್ನುವ ಪ್ರಶ್ನೆ ಬರುತ್ತದೆ ಎಂದು ಹೇಳಿದರು.

ಎಥೆನಾಲ್‌ಗೆ ಸಂಬಂಧಿಸಿದಂತೆ ಈಗಿನ ಸಮಸ್ಯೆಗೆ ಕೇಂದ್ರ ಸರಕಾರದ ಎಡವಟ್ಟುಗಳೇ ಕಾರಣ ಎಂದು ಆರೋಪಿಸಿದ ಅವರು, ಕೇಂದ್ರ ಸರಕಾರ ಶೇಕಡ 20-30ರಷ್ಟು ಉತ್ಪಾದಿತ ಎಥೆನಾಲನ್ನೂ ಖರೀದಿಸುತ್ತಿಲ್ಲ. ಸಹಜವಾಗಿಯೇ ಕೈಗಾರಿಕೆಯವರು ಏನು ಮಾಡಬೇಕೆನ್ನುವ ಪ್ರಶ್ನೆ ಉದ್ಭವಿಸುತ್ತದೆ ಎಂದರು.

ಎಥೆನಾಲ್ ಅನ್ನು ಪೆಟ್ರೋಲ್ ಜತೆ ನಿಗದಿಗಿಂತ ಹೆಚ್ಚು ಮಿಶ್ರಣ ಮಾಡಿರುವ ಕುರಿತು ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆಗ್ರಹಿಸಿರುವುದು ನ್ಯಾಯಯುತವಾಗಿದೆ. ಕೇಂದ್ರ ಸರ್ಕಾರ ಆರೋಪ ನಿರಾಕರಿಸಿದ ಮಾತ್ರಕ್ಕೆ ಎಲ್ಲವೂ ಸರಿಯಾಗಿದೆ ಎಂದರ್ಥವಲ್ಲ ಎಂದು ಸಚಿವ ಎಂ. ಬಿ. ಪಾಟೀಲ್ ದೂರಿದರು.

ಇನ್ನಷ್ಟು ಸುದ್ದಿಗಳು