ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ಎಥೆನಾಲ್ ಮಿಶ್ರಣ ದೂರು: 67 ಕಡೆ ಇಂಧನ ಮಾದರಿ ಪರಿಶೀಲನೆ ನಡೆಸಲಾಗಿದೆ ಎಂದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಬೆಂಗಳೂರು: ಇಂಧನದಲ್ಲಿ ಎಥೆನಾಲ್ ಮಿಶ್ರಣ ಹೆಚ್ಚಳದ ವಿಚಾರವಾಗಿ ಕೇಂದ್ರ ಸರ್ಕಾರ ಈ ವಿಚಾರದಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ವಾಹನಗಳ ಕಾರ್ಯಕ್ಷಮತೆ, ಇಂಧನದ ಗುಣಮಟ್ಟ ಹಾಗೂ ಜನರ ಸುರಕ್ಷತೆ ಮುಖ್ಯ. ಕಡಿಮೆ ಬೆಲೆಗೆ ಎಥೆನಾಲ್ ದೊರೆಯುತ್ತದೆ ಎಂಬ ಕಾರಣಕ್ಕೆ ಅದರಿಂದ ಲಾಭ ಪಡೆಯುವ ಉದ್ದೇಶದಿಂದ ಮಿಶ್ರಣದ ಪ್ರಮಾಣ ಹೆಚ್ಚಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಕ್ಷೇಪಿಸಿದ್ದಾರೆ.

ಜನರಿಗೆ ತೊಂದರೆ ಉಂಟುಮಾಡುವುದು ಒಳ್ಳೇದಲ್ಲ. ಇಡೀ ದೇಶದ ವಾಹನ ಸವಾರರಲ್ಲಿ ಆತಂಕ ಮೂಡಿಸಿರುವ ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಅಪಾಯಕಾರಿ ಪರಿಸ್ಥಿತಿಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು