ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು
ಜಿಲ್ಲೆ

ಕೇಂದ್ರ ಸಚಿವ ವಿ ಸೋಮಣ್ಣ ಲೋಕಭವನಕ್ಕೆ ಭೇಟಿ-ರಾಜ್ಯಪಾಲರಾದ ಡಾ ಸುಧಾ ಯಾದವ್ ಅವರೊಂದಿಗೆ ಚರ್ಚೆ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಲೋಕಭವನದಲ್ಲಿಂದು ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಈ ವೇಳೆ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು. ಈ ನಡುವೆ, ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರೂ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ, ಚರ್ಚಿಸಿದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರ್.ಅಶೋಕ, ರಾಜ್ಯಪಾಲರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿರುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿಗಳಾದ ತು

ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಲೋಕಭವನದಲ್ಲಿಂದು ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು.

ಈ ವೇಳೆ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು.

ಈ ನಡುವೆ, ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರೂ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ, ಚರ್ಚಿಸಿದರು.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರ್.ಅಶೋಕ, ರಾಜ್ಯಪಾಲರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಹಾಗೂ ಗೌರವ್ ಗುಪ್ತಾ ಅವರು ರಾಜ್ಯಪಾಲರಾದ ಸುಧಾ ಯಾದವ್ ಅವರನ್ನು ಭೇಟಿ ಮಾಡಿ, ಸಮಾಲೋಚಿಸಿದರು.

ಇನ್ನಷ್ಟು ಜಿಲ್ಲೆ ಸುದ್ದಿಗಳು

ಎಲ್ಲಾ ನೋಡಿ