ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ಜೂನ್‌ ವೇಳೆಗೆ 18 ಸಾವಿರ ಶಿಕ್ಷಕರ ನೇಮಕಾತಿ: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಚಿಕ್ಕಮಗಳೂರು: ರಾಜ್ಯದಲ್ಲಿ ಮುಂದಿನ ವರ್ಷದ ಜೂನ್ ತಿಂಗಳ ಒಳಗಾಗಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ಜನವರಿ ಒಳಗೆ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ 15 ಜಿಲ್ಲೆಗಳಲ್ಲಿ ಈಗಾಗಲೇ ದ್ವಿಭಾಷಾ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ. ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ನರ್ಸರಿ ತರಗತಿ ಆರಂಭದ ಜೊತೆಗೆ ಶಿಕ್ಷಕರನ್ನು ನೇಮಕ ಮಾಡಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ಸುದ್ದಿಗಳು