ಮಹಿಳಾ ಸಂಸದೀಯರ ಭಾರತ ಪ್ರಾದೇಶಿಕ ಘಟಕದ ಸಮ್ಮೇಳ-ವಿಧಾನಪರಿಷತ್ ಸಭಾಪತಿ ಸಲೀಂ ಅಹಮದ್ ಮಾಹಿತಿ


ಪ್ರಧಾನಿ ನರೇಂದ್ರ ಮೋದಿ ಅವರು ಇದೇ 13ರಂದು ಮೈಸೂರಿಗೆ ಆಗಮಿಸಲಿದ್ದು, ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು, ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಾರಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಸುಮಾರು 115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ತಾರಾಲಯವು ಮೈಸೂರಿನ ಶಿಕ್ಷಣ, ವಿಜ್ಞಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೊಸ ಮೆರುಗು ನೀಡಲಿದೆ ಎಂದು ಹೇಳಿದರು. ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಪ್ರದೇಶಾಭಿವೃದ್ಧಿ ಅಡಿ ಅನುದಾನ ನೀ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 13ರಂದು ಮೈಸೂರಿಗೆ ಆಗಮಿಸಲಿದ್ದು, ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು, ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಾರಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಸುಮಾರು 115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ತಾರಾಲಯವು ಮೈಸೂರಿನ ಶಿಕ್ಷಣ, ವಿಜ್ಞಾನ ಹಾಗೂ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೊಸ ಮೆರುಗು ನೀಡಲಿದೆ ಎಂದು ಹೇಳಿದರು.
ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಪ್ರದೇಶಾಭಿವೃದ್ಧಿ ಅಡಿ ಅನುದಾನ ನೀಡಿದ್ದು, ಬೆಂಗಳೂರಿನ ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ ಹಾಗೂ ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಈ ಕೇಂದ್ರ ಕಾರ್ಯ ನಿರ್ವಹಿಸಲಿದೆ. ವಿಜ್ಞಾನ ಜಾಗೃತಿ, ಶೈಕ್ಷಣಿಕ ಶಿಬಿರಗಳು ಹಾಗೂ ತರಬೇತಿ ಕಾರ್ಯಕ್ರಮಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.