ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ಬಸ್ ದರ, ಹಾಲು-ಮೊಸರು ಬೆಲೆ ಏರಿಕೆ ಸಮರ್ಥಿಸಿಕೊಂಡ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್: ಎಸ್‌ಐಆರ್ ಕುರಿತು ಆಕ್ಷೇಪ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಬೆಂಗಳೂರು: ರಾಜ್ಯದಲ್ಲಿ ಬಸ್ ದರ, ಹಾಲು, ಮೊಸರಿನ ಬೆಲೆ ಏರಿಕೆ ಮಾಡಿರುವುದನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ನ್ಯಾಯ ಒದಗಿಸುವ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಸಾರಿಗೆ ದರ ಏರಿಕೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು, ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಕೇಳಿದ್ದಾರೆ. ಇದೇ ವೇಳೆ ಎಸ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಒಂದು ಕೋಟಿ 8

ಬೆಂಗಳೂರು: ರಾಜ್ಯದಲ್ಲಿ ಬಸ್ ದರ, ಹಾಲು, ಮೊಸರಿನ ಬೆಲೆ ಏರಿಕೆ ಮಾಡಿರುವುದನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆದಾಯ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರಿಗೂ ನ್ಯಾಯ ಒದಗಿಸುವ ರೀತಿಯಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಸಾರಿಗೆ ದರ ಏರಿಕೆಯನ್ನು ಪ್ರಶ್ನಿಸುತ್ತಿರುವ ಬಿಜೆಪಿ ನಾಯಕರು, ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಕೇಳಿದ್ದಾರೆ.

ಇದೇ ವೇಳೆ ಎಸ್‌ಐಆರ್ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಒಂದು ಕೋಟಿ 8 ಲಕ್ಷ ಮತದಾರರ ಹೆಸರುಗಳನ್ನು ಅಳಿಸಿ ಹಾಕಲಾಗಿದೆ. ಈ ಪೈಕಿ 16 ಲಕ್ಷ ಮಂದಿ ಮೃತಪಟ್ಟಿದ್ದಾರೆ. ಉಳಿದವರು ಜೀವಂತವಾಗಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಕಾರಣದಿಂದಾಗಿ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿಲ್ಲ ಎಂಬುದು ಕಾಂಗ್ರೆಸ್ ನಿಲುವಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು