ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು
ಜಿಲ್ಲೆ

ಬಿಎಲ್‌ಡಿಇ ಹಳೆಯ ವಿದ್ಯಾರ್ಥಿಗಳ ಸಂಘದ 37ನೇ ವಾರ್ಷಿಕ ಸಭೆ

ಬರಹ: ಎಂ. ಎನ್. ನದಾಫ್1 ನಿಮಿಷ ಓದು
ಜಮಖಂಡಿ ನಗರದ ಕಾನಿಪ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರೊ. ಎಂ.ಸಿ. ಕಾರಭಾರಿ ಮಾತನಾಡಿದರು. ಶ್ರೀನಿವಾಸ ಕಟ್ಟಿಮನಿ, ಸಂಗಮೇಶ ಬಾದರದಿನ್ನಿ, ಎಚ್.ಎಲ್. ತುಂಗಳ, ಅರವಿಂದ ಕಡಕೋಳ, ಚಂದ್ರಕಾಂತ ಜನವಾಡ, ಡಾ. ಎ.ಐ. ಮಯರ ಇದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಜಮಖಂಡಿ: ಬಿಎಲ್‌ಡಿಇ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳ ಸಂಘದ 37ನೇ ವಾರ್ಷಿಕ ಸರ್ವಸಾಧಾರಣ ಸಭೆ, ಅಭಿನಂದನಾ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವು ನ. 9ರಂದು ಬೆಳಿಗ್ಗೆ 10.30ಕ್ಕೆ ಎಲ್.ಎಚ್-1ರಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೊ. ಎಂ.ಸಿ. ಕಾರಭಾರಿ ತಿಳಿಸಿದರು.

ನಗರದ ಕಾನಿಪ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳಾದ ಹೊಸಪೇಟೆ (ವಿಜಯನಗರ) ಕರ್ನಾಟಕ ಲೋಕಾಯುಕ್ತ ಇಲಾಖೆಯ ಪೊಲೀಸ್ ಇನ್ಸ್ಪೆಕ್ಟರ್ ಮಹಾದೇವ ಶಿರಹಟ್ಟಿ, ಅಥಣಿಯ ಸಿಪಿಐ ಸಂತೋಷ ಹಳ್ಳೂರ ಆಗಮಿಸಲಿದ್ದಾರೆ. ಅರುಣಕುಮಾರ ಶಹಾ ಅಧ್ಯಕ್ಷತೆ, ಪ್ರೊ. ಎಸ್.ಎಚ್. ಲಗಳಿ ಅತಿಥಿಗಳಾಗಿ ಆಗಮಿಸುವರು.

ಹಳೆಯ ವಿದ್ಯಾರ್ಥಿಗಳ ಸಂಘವು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಪ್ರತಿವರ್ಷ ಪ್ರೋತ್ಸಾಹಧನ ವಿತರಿಸುತ್ತಿದೆ. ಅಲ್ಲದೆ, ಮಹಾವಿದ್ಯಾಲಯದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ವಿವಿಧ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ತಿಳಿಸಿದರು.

ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಘದ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತಮ್ಮ ಸಲಹೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಕಟ್ಟಿಮನಿ, ಖಜಾಂಚಿ ಸಂಗಮೇಶ ಬಾದರದಿನ್ನಿ, ನಿರ್ದೇಶಕರಾದ ಎಚ್.ಎಲ್. ತುಂಗಳ, ಅರವಿಂದ ಕಡಕೋಳ, ಚಂದ್ರಕಾಂತ ಜನವಾಡ, ಡಾ. ಎ.ಐ. ಮಯರ ಇದ್ದರು.

ಇನ್ನಷ್ಟು ಜಿಲ್ಲೆ ಸುದ್ದಿಗಳು

ಎಲ್ಲಾ ನೋಡಿ