ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ರಾಷ್ಟ್ರೀಯ ದತ್ತು ಮಾಸಾಚರಣೆ 2026-ಕೊಳ್ಳೇಗಾಲದಲ್ಲಿ ಅರಿವು ಕಾರ್ಯಕ್ರಮ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ದತ್ತು ಮಾಸಾಚರಣೆ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ ಡಾ. ಸಿ.ಎನ್. ನೀಲಾದೇವಿ ಉದ್ಘಾಟಿಸಿದರು.

ಈ ವೇಳೆ ಜೆಎಸ್ ಎಸ್ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಹೇಮೇಶ್ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಕುಮಾರ್, ಅಶೋಕ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ಸರಸ್ವತಿ, ಕೊಳ್ಳಗಾಲದ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಜಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಬಳಿಕ ಸಿ.ಎನ್. ನೀಲಾದೇವಿ, ಸಮಾಜದಲ್ಲಿ ಮಕ್ಕಳ ರಕ್ಷಣೆ ಪ್ರತಿಯೊಬ್ಬ ಭಾರತೀಯರ ಜವಾಬ್ದಾರಿಯಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ, ತೊಂದರೆಯಾದ ಸಂದರ್ಭದಲ್ಲಿ ಮಾಹಿತಿ ನೀಡುವ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕಾಗಿದೆ. ದತ್ತು ಸ್ವೀಕಾರ ಕಾರ್ಯಕ್ರಮಗಳ ಮೂಲಕ ಅಗತ್ಯವಿರುವ ಮಕ್ಕಳು ಮತ್ತು ಪೋಷಕರಿಗೆ ಕಾನೂನಿನ ನೆಲೆಗಟ್ಟಿನಲ್ಲಿ ಮಾಹಿತಿ ಒದಗಿಸುವ ಜೊತೆಗೆ, ಮಗುವಿನ ಸೂಕ್ತ ಪಾಲನೆ, ಪೋಷಣೆ ಹಾಗೂ ಜವಾಬ್ದಾರಿ ಕುರಿತು ಮಾಹಿತಿ ನೀಡಬೇಕಾಗಿದೆ ಎಂದರು.

ಅಶೋಕ್, ರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಪುನರ್ವಸತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ರೂಪಿಸಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪ್ರತಿವರ್ಷ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಕಾನೂನು ಬದ್ಧ ದತ್ತು ಸ್ವೀಕಾರ ಸುರಕ್ಷಿತ ಮಾರ್ಗವಾಗಿದೆ ಎಂದು ತಿಳಿಸಿದರು.

ಸರಸ್ವತಿ,ಸಮಾಜಲ್ಲಿ ವಿವಿಧ ಕಾರಣಗಳಿಂದ ಅನಾಥರಾದ ಹಾಗೂ ಪೋಷಕರಿಂದ ತ್ಯಜಿಸಲ್ಪಟ್ಟ ಮಕ್ಕಳಿಗೆ ಉತ್ತಮ ವಾತಾವರಣ ಅವರ ಲಾಲನೆ, ಪಾಲನೆ, ಪೋಷಣೆ, ಶಿಕ್ಷಣ ಸೇರಿದಂತೆ ಇನ್ನಿತರ ಕಾನೂನಾತ್ಮಕ ಮಾಹಿತಿಯನ್ನು ನೀಡುವಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಳು