ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು
ಜಿಲ್ಲೆ

ಹೋಟೆಲ್, ಬೇಕರಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಬರಹ: ಎಂ. ಎನ್. ನದಾಫ್1 ನಿಮಿಷ ಓದು
ಜಮಖಂಡಿ ನಗರದ ವಿವಿಧ ಹೋಟೆಲ್ ಮತ್ತು ಬೇಕರಿಗಳ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ್, ತಹಸೀಲ್ದಾರ್ ಅನಿಲ ಬಡಿಗೇರ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ಜಿ.ಎಸ್. ಗಲಗಲಿ ನೇತೃತ್ವದ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲಿಸಿತು.

8 ಹೋಟೆಲ್‌ಗಳಿಗೆ ನೋಟಿಸ್; ಅವಧಿ ಮೀರಿದ ಆಹಾರ ಪದರ‍್ಥ ವಶ

ಜಮಖಂಡಿ: ನಗರದ ಬಸ್ ನಿಲ್ದಾಣದ ಸುತ್ತಮುತ್ತ, ಅಂಬೇಡ್ಕರ್ ವೃತ್ತ ಹಾಗೂ ಟಿಪ್ಪು ಸುಲ್ತಾನ್ ವೃತ್ತದ ವಿವಿಧ ಹೋಟೆಲ್, ಬೇಕರಿ, ರೆಸ್ಟೋರೆಂಟ್ ಮತ್ತು ಅಂಗಡಿಗಳ ಮೇಲೆ ಉಪವಿಭಾಗಾಧಿಕಾರಿ ಶ್ವೇತಾ ಬಿಡಿಕರ್ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಅನಿಲ ಬಡಿಗೇರ, ತಾಲೂಕು ಆರೋಗ್ಯಾಧಿಕಾರಿ ಡಾ. ಜಿ.ಎಸ್. ಗಲಗಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಜಂಟಿ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲಿಸಿತು.

ಆಹಾರ ಸುರಕ್ಷತಾ ಅಧಿಕಾರಿಗಳು, ನಗರಸಭೆ ಪೌರಾಯುಕ್ತರು ಹಾಗೂ ಪೊಲೀಸ್ ಸಿಬ್ಬಂದಿ ಕರ‍್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ವೇಳೆ ಆಹಾರ ತಯಾರಿಕಾ ಸ್ಥಳ, ಸಂಗ್ರಹಣಾ ಕೊಠಡಿ, ಸಿಬ್ಬಂದಿಗಳ ವೈಯಕ್ತಿಕ ಸ್ವಚ್ಛತೆ, ಆಹಾರ ಪದರ‍್ಥಗಳ ಗುಣಮಟ್ಟ, ತಯಾರಿಕೆ ಮತ್ತು ಮುಕ್ತಾಯ ದಿನಾಂಕ ಸೇರಿದಂತೆ ಸ್ವಚ್ಛತಾ ಕ್ರಮಗಳನ್ನು ಪರಿಶೀಲಿಸಲಾಯಿತು.

ಕಾರ‍್ಯಾಚರಣೆ ವೇಳೆ ಅವಧಿ ಮೀರಿದ ಹಾಗೂ ತಯಾರಿಕೆ ಮತ್ತು ಮುಕ್ತಾಯ ದಿನಾಂಕ ನಮೂದಿಸದ ಆಹಾರ ಪದರ‍್ಥಗಳನ್ನು ವಶಪಡಿಸಿಕೊಳ್ಳಲಾಯಿತು. ನಿಯಮ ಉಲ್ಲಂಘಿಸಿದ ಒಟ್ಟು 8 ಹೋಟೆಲ್ ಮತ್ತು ಬೇಕರಿಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಿದರು.

ವಿಷಯಗಳು

ಇನ್ನಷ್ಟು ಜಿಲ್ಲೆ ಸುದ್ದಿಗಳು

ಎಲ್ಲಾ ನೋಡಿ