ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಸೆಮಿಫೈನಲ್ನಲ್ಲಿ ಭಾರತ ತಂಡ ದಕ್ಷಿಣ ಕೊರಿಯಾ ವಿರುದ್ಧ 8-1 ಗೋಲುಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿಗಾಗಿ ಜಪಾನ್ ತಂಡವನ್ನು ಎದುರಿಸಲಿದೆ.