ವಿಷಯ
ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಲೋಕಭವನದಲ್ಲಿಂದು ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಈ ವೇಳೆ ಬಿಜೆಪಿಯ ಹಲವು ನಾಯಕರು ಉಪಸ್ಥಿತರಿದ್ದರು. ಈ ನಡುವೆ, ವಿಧಾನಮಂಡಲದ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರೂ ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ, ಚರ್ಚಿಸಿದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರ್.ಅಶೋಕ, ರಾಜ್ಯಪಾಲರನ್ನು ಭೇಟಿ ಮಾಡಿ, ದೀಪಾವಳಿ ಹಬ್ಬದ ಶುಭಾಶಯ ಕೋರಿರುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ಹಿರಿಯ ಐಎಎಸ್ ಅಧಿಕಾರಿಗಳಾದ ತು